For the best experience, open
https://m.samyuktakarnataka.in
on your mobile browser.

56 ಪ್ರಕರಣಗಳಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕೇಸ್ ವಾಪಸ್

04:34 PM Oct 14, 2024 IST | Samyukta Karnataka
56 ಪ್ರಕರಣಗಳಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕೇಸ್ ವಾಪಸ್

ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲಿ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಮಾಡಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮುಂದೆ 56 ಕೇಸ್‌ಗಳು ಬಂದಿದ್ದವು. 43 ಕೇಸ್‌ಗಳನ್ನು ವಿತ್‌ಡ್ರಾ ಮಾಡಿದ್ದೇವೆ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಬೇರೆಬೇರೆ ಸಂದರ್ಭಗಳಲ್ಲಿ ಪ್ರತಿಭಟನೆ ಮಾಡಿರುವ ಪ್ರಕರಣಗಳಿವೆ. ಅವೆಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ ಅಥವಾ 43 ಪ್ರಕರಣಗಳು ಅಲ್ಪಸಂಖ್ಯಾತರಿಗೆ ಸೇರಿರುವ ಪ್ರಕರಣಗಳಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು. ಆ ರೀತಿ ಮಾಡಲು ಬರುವುದಿಲ್ಲ. ಎಲ್ಲವನ್ನು ಸಮಾನ ದೃಷ್ಟಿಯಿಂದ ನೋಡಬೇಕಾಗುತ್ತದೆ, ಯಾವುದೇ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ಪ್ರಕ್ರಿಯೆ ಇದೆ. ನಮಗೆ ಬರುವ ಮನವಿಗಳನ್ನು ಇಲಾಖೆಗೆ ಕಳುಹಿಸುತ್ತೇವೆ‌. ಅವರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸಾಕ್ಷ್ಯ ಸಂಗ್ರಹಣೆಯಲ್ಲಿ ಆದ‌ ಲೋಪದೋಷಗಳನ್ನು ಪರಿಶೀಲಿಸಿ ಸಚಿವ ಸಂಪುಟ ಉಪಸಮಿತಿ ಮುಂದೆ ತರುತ್ತಾರೆ‌, ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಪ್ರಕರಣಗಳಲ್ಲಿ ಬೇಕಾದಷ್ಟು ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಮಾಡಿದ್ದಾರೆ‌.‌ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರ ವಿರುದ್ಧ ಕೇಸ್‌ಗಳಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ಕೇಸ್‌ಗಳನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿಯವರು ಯಾರ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಿವೇಶನ ವಾಪಸ್: ರಾಹುಲ್ ಖರ್ಗೆ ಅವರು ಸಿದ್ಧಾರ್ಥ ಟ್ರಸ್ಟ್‌‌ ನಿವೇಶನವನ್ನು ವಾಪಸ್‌ನಲ್ಲಿ ಯಾವುದೇ ಕಾನೂನು ಉಲ್ಲಂಘನೆ ಆಗಿಲ್ಲ. ಆಪಾದನೆ ಮಾಡುತ್ತಿರುವುದರಿಂದ ಬೇಡ ಎಂದು ನಿವೇಶ ವಾಪಸ್ ನೀಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣಿಸುವುದೆಲ್ಲ ಹಳದಿ ಎಂಬಂತೆ, ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ .ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಭೂಮಿ ವಾಪಸ್ ನೀಡಿಲ್ಲ ಎಂದಿದ್ದಾರೆ. ಭೂಮಿ ಹಂಚಿಕೆಯಾಗಿದ್ದಕ್ಕೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಸುಮ್ಮನೆ ಏಕೆ ಗೊಂದಲ ಎಕೆ ಎಂದು ಭೂಮಿ ವಾಪಸ್ ಕೊಟ್ಟಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆ ಮಾಡದೆ ನಿವೇಶನ‌ ತೆಗೆದುಕೊಂಡಿದ್ದೇವೆ. ಆಪಾದನೆ ಮಾಡುತ್ತಿರುವುದರಿಂದ ಬೇಡ ಎಂದು ನಿವೇಶ ವಾಪಸ್ ನೀಡಿದ್ದಾರೆ ಎಂದರು.

Tags :