5,8,9 ನೇ ತರಗತಿ ಬೋರ್ಡ್ ಎಕ್ಸಾಂಗೆ 'ಸುಪ್ರೀಂ ಕೋರ್ಟ್' ತಡೆಯಾಜ್ಞೆ
05:25 PM Mar 12, 2024 IST | Samyukta Karnataka
ಬೆಂಗಳೂರು: 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಪುರಸ್ಕರಿಸಿದ್ದು, ಪರೀಕ್ಷೆ ನಡೆಸದಂತೆ ತಡೆ ನೀಡಿದೆ.