8 ವರ್ಷದ ಬಾಲಕಿಗೆ ಹೃದಯಾಘಾತ
ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ
ಎಂಟು ವರ್ಷದ ಬಾಲಕಿ ಹೃದಯಾಘಾತದಿಂದ ಶಾಲೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ,
ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ, ಗುಜರಾತ್‌ನ ಶಾಲೆಯೊಂದರಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಹುಡುಗಿ ತನ್ನ ತರಗತಿಗೆ ಹೋಗುವಾಗ, ಅವಳು ಲಾಬಿಯಲ್ಲಿ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾಳೆ. ಕೆಲವೇ ಸೆಕೆಂಡುಗಳಲ್ಲಿ ಕುರ್ಚಿ ಕುಸಿದುಬಿದ್ದಿದೆ.. ಈ ವಿಷಯ ಅಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಗಮನಕ್ಕೆ ಬಂದು ಸ್ವಲ್ಪ ಸಮಯದ ನಂತರ, ಶಿಕ್ಷಕರೊಬ್ಬರು ವಿದ್ಯಾರ್ಥಿ ಕುಸಿದು ಬೀಳುವುದನ್ನು ಗಮನಿಸಿ ಸಿಪಿಆರ್ ಮಾಡಿದರು ಆದರೆ ಅದು ಯಶಸ್ವಿಯಾಗಲಿಲ್ಲ. ತಕ್ಷಣ ಆಸ್ಪತ್ರೆಗೆ ಕರೆದೊಯ್ದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕರ್ನಾಟಕದಲ್ಲಿ ಇತ್ತಿಚೆಗೆ ಚಾಮರಾಜನಗರದ ಸೆಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಳು.