ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ

08:28 PM Dec 22, 2024 IST | Samyukta Karnataka

ಮುಂದಿನ 88 ನೇ ಸಾಹಿತ್ಯ ಸಮೇಳನ ಬಳ್ಳಾರಿಯಲ್ಲಿ

ಮಂಡ್ಯ : ಡಿ.20, 21, 22ರಂದು ಮೂರು ದಿನಗಳ ಕಾಲ ಮಂಡ್ಯದಲ್ಲಿ‌ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ಯಶಸ್ಸಿನೊಂದಿಗೆ ಸಮಾರೋಪಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷರು, ನಾಡೋಜ ಗೊ.ರು.ಚನ್ನಬಸಪ್ಪ, ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ ಬೀರುತ್ತದೆ. ಇಲ್ಲಿ ಬಹಳ ಸುಗಮವಾಗಿ ಸಮ್ಮೇಳನ ಜರುಗಿದೆ. ಸಾಮಾನ್ಯವಾಗಿ ಊಟ, ವಸತಿ ಬಗ್ಗೆ ದೂರು ಬರುತ್ತವೆ. ಆದರೆ ಇಲ್ಲಿ ಅದ್ಯಾವುದು ಕೇಳಲಿಲ್ಲ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ ಎಂದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ನೆಲ, ಜಲ, ಭಾಷೆ ಉಳಿವಿಗೆ ಸರ್ಕಾರ ಸದಾ ಬದ್ಧ ಎಂದರು.

ಕಳೆದ ಮೂರು ದಿನಗಳಲ್ಲಿ 6 ಲಕ್ಷಕ್ಕೂ ಅಧಿಕ ಜನರು ಸಮ್ಮೇಳನಕ್ಕೆ ಆಗಮಿಸಿದ್ದಾರೆ. ಇದಲ್ಲದೇ 18 ದೇಶಗಳಿಂದ 200ಕ್ಕೂ ಅಧಿಕ ಕನ್ನಡ ಪ್ರೇಮಿಗಳು ಆಗಮಿಸಿದ್ದು ವಿಶೇಷ. ಸಮ್ಮೇಳನಾಧ್ಯಕ್ಷರ ಆಯ್ಕೆ, ಗೋಷ್ಠಿ, ಕಾರ್ಯಕ್ರಮಗಳು ಜನರ ಮೆಚ್ಚುಗೆ ಗಳಿಸಿವೆ ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ‌ ಕುಮಾರಸ್ವಾಮಿ ಅವರು ಮಾತನಾಡಿ, ವೈಜ್ಞಾನಿಕ ಪ್ರಗತಿ ನಡುವೆ ಭಾಷೆ ಉಳಿಸುವ ಸವಾಲಿದೆ. ಭಾಷೆಯ ಮೇಲಿನ ಅನ್ಯ ಭಾಷೆಗಳ ಏರಿಕೆ, ಪರಿಣಾಮಗಳ ಬಗ್ಗೆ ಆತಂಕವಿದೆ. ಆದರೆ ನಮ್ಮ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಸಮ್ಮೇಳನ ಸಹಕಾರಿಯಾಗಲಿದೆ. ಗ್ರಾಮೀಣ ಮಕ್ಕಳು ನಗರ ಪ್ರದೇಶದ ಮಕ್ಕಳೊಂದಿಗಿನ ಪೈಪೋಟಿ ತಪ್ಪಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಯಿತು. ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಲಾಯಿತು ಎಂದರು.

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕೇವಲ ಸಮ್ಮೇಳನ ಮಾಡಿದರೆ ಸಾಲದು. ಸಮ್ಮೇಳನದ ನಿರ್ಣಯಗಳನ್ನು ಅನುಷ್ಠಾನಕ್ಕೆ ಬರುವ ರೀತಿಯಲ್ಲಿ ನೋಡಿಕೊಳ್ಳುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿದೆ. ಇಲ್ಲಿನ ನಿರ್ಣಯಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು. ಅನುಷ್ಠಾನಕ್ಕೆ ಬಂದ ನಿರ್ಣಯಗಳು ಎಷ್ಟು ಎಂಬುದನ್ನು ಬಳ್ಳಾರಿ ಸಾಹಿತ್ಯ ಸಮ್ಮೇಳನದಲ್ಲಿ ಘೋಷಿಸಬೇಕು ಎಂದರು.

ಹಿರಿಯ ಸಾಹಿತಿ ಡಾ. ಸಿ.ಪಿ.ಕೃಷ್ಣಕುಮಾರ್ ಅವರು ಸಮಾರೋಪದ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಸ್ವಾಮೀಜಿ, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಅವಧೂತ ಶ್ರೀ ವಿನಯ್ ಗುರೂಜಿ ಶುಭನುಡಿಗಳನ್ನಾಡಿದರು.

Tags :
#87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ#ಕನ್ನಡ#ಕನ್ನಡಜಾತ್ರೆ#ಮಂಡ್ಯ#ಸಮಾರೋಪ
Next Article