For the best experience, open
https://m.samyuktakarnataka.in
on your mobile browser.

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ

05:22 PM Nov 20, 2024 IST | Samyukta Karnataka
87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ ರು  ಚನ್ನಬಸಪ್ಪ ಆಯ್ಕೆ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಬರುವ ಡಿಸೆಂಬರ್ 20,21,22ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ 94 ವರ್ಷದ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಯಿತು. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಗೊ. ರು. ಚೆನ್ನಬಸಪ್ಪನವರು ಜನಿಸಿದರು. ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ ಇವರ ಪ್ರಮುಖ ಕೃತಿಗಳಾಗಿವೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ಅವರು ಬಹುಮುಖ್ಯ ಪಾತ್ರವಹಿಸಿದ್ದರು. ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಗೊ ರು ಚನ್ನಬಸಪ್ಪ ಅವರ ಪ್ರಮುಖ ಕೃತಿಗಳು. ‘ಜಾನಪದ ಜಗತ್ತು’, ‘ಪಂಚಾಯತ್ ರಾಜ್ಯ’, ‘ಕನ್ನಡ ಸಾಹಿತ್ಯ ಪರಿಷತ್ತಿನ ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ಕೆಲಸ ಮಾಡಿದ್ದಾರೆ.

Tags :