ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

BMTC, KSRTC ವಿವಿಧ ಹುದ್ದೆಗಳ ಪರೀಕ್ಷೆಯ ಅಂತಿಮ ಅಂಕ ಪಟ್ಟಿ ಪ್ರಕಟ

11:43 AM Aug 10, 2024 IST | Samyukta Karnataka

BMTC(ಕಲ್ಯಾಣ ಕರ್ನಾಟಕ), KUWSDB & KKRTC ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕ ಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿ, ಕೆಕೆಆರ್ ಟಿಸಿ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
BMTC(ಕಲ್ಯಾಣ ಕರ್ನಾಟಕ), KUWSDB & KKRTC ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 13.07.2024 ಮತ್ತು 14.07.2024 ರಂದು BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ: ದಿನಾಂಕ 16.07.2024 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ, ದಿನಾಂಕ 18.07.2024 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿರುತ್ತದೆ. ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ ಸೈಟ್‌ನಲ್ಲಿ ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 03.08.2024 ಸಂಜೆ 5.30 ರೊಳಗೆ ನಿಗದಿತ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿತ್ತು. ತಾತ್ಕಾಲಿಕ ಅಂಕ ಪಟ್ಟಿಗೆ ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಂಕ ಪಟ್ಟಿಯನ್ನು ಸಿದ್ದಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಅಂತಿಮ ಪಟ್ಟಿಯನ್ನು ಸಂಬಂಧಪಟ್ಟ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.

Tags :
#BMTC#KKRTC #KEA#KSRTC#KUWSDB#samyuktakarnataka#ಅಂಕ ಪಟ್ಟಿ ಪ್ರಕಟ#ಆರೋಗ್ಯಹಬ್ಬ#ಕಲ್ಯಾಣ ಕರ್ನಾಟಕ
Next Article