ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

BS6 ಮಾದರಿಯ 100 ಹೊಸ ಬಿಎಂಟಿಸಿ ಬಸ್​ಗಳಿಗೆ ಚಾಲನೆ

01:17 PM Sep 12, 2024 IST | Samyukta Karnataka

ಬೆಂಗಳೂರು: ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್‌ಗಳು ಬಿಎಂಟಿಸಿಗೆ ಸೇರಲಿವೆ. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ. ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್‌ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಮಹದಾಯಿ ಕಣದಲ್ಲಿ ರಾಜಕೀಯದ ಮಹಾದಾಟ

Tags :
#100Bus#೧೦೦ಬಸ್‌#Bengaluru#BMTC#ಗ್ಯಾರಂಟಿ#ಬಿಎಂಟಿಸಿ
Next Article