ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

HSRP ನಂಬರ್ ಪ್ಲೇಟ್: ವಾಹನ ಸವಾರರಿಗೆ ಮತ್ತೊಂದು ಅವಕಾಶ

02:00 PM Sep 18, 2024 IST | Samyukta Karnataka

ಬೆಂಗಳೂರು: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿ ಗಡುವು ನೀಡಿತ್ತು. ಆದರೆ, ಈ ಬಗ್ಗೆ ಸೆ.18ರಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಯಾವುದೇ ದಂಡವನ್ನು ವಿಧಿಸಿರಲಿಲ್ಲ. ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ವಕೀಲರ ಮನವಿ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿಯನ್ನು 2024ರ ನವೆಂಬರ್ 20ರ ವರೆಗೆ ಅವಧಿ ವಿಸ್ತಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದ್ದು, ಈ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಈ ಮನವಿ ಪರಿಗಣಿಸಿದ ನ್ಯಾಯಾಲಯ ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವೂ ವಿಸ್ತರಣೆಗೊಂಡಂತಾಗಿದೆ.

Tags :
#HSRP
Next Article