IND vs NZ: ಮೊದಲ ದಿನದಾಟ ರದ್ದು
ಬೆಂಗಳೂರು: ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಮಳೆಯಿಂದಾಗಿ ರದ್ದಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ತಮ ಒಳಚರಂಡಿ ವ್ಯವಸ್ಥೆ ಇರುವುದರಿಂದ ಮಳೆ ಕಡಿಮೆಯಾದ ಬಳಿಕ ಪಂದ್ಯ ಆರಂಭವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಎರಡು ದಿನ ನಿರಂತರ ಮಳೆಯಾಗಲಿದೆ. ಭಾರತ ತಂಡ ಡಬ್ಲ್ಯುಟಿಸಿ ಫೈನಲ್‌ನ ಮೇಲೆ ಕಣ್ಣಿಟ್ಟಿದೆ. ಟೀಂ ಇಂಡಿಯಾ ಇನ್ನೂ ಎಂಟು ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಅದರಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಹಾಗೂ ಆಸ್ಟ್ರೇಲಿಯಾ ವಿರುದ್ಧ ಐದು ಟೆಸ್ಟ್ ಪಂದ್ಯಗಳು ನಡೆಯಲಿವೆ. ಈ ಎಂಟು ಟೆಸ್ಟ್ ಪಂದ್ಯಗಳಲ್ಲಿ ರೋಹಿತ್ ಸೇನೆ ಐದು ಪಂದ್ಯಗಳನ್ನು ಗೆದ್ದರೆ, ಯಾವುದೇ ಅನುಮಾನವಿಲ್ಲದೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಮೊದಲ ದಿನದಾಟ ಸಂಪೂರ್ಣ ಮೊಟಕುಗೊಂಡ ಹಿನ್ನೆಲೆಯಲ್ಲಿ ಎರಡನೇ ದಿನದಾಟದ ಸಮಯ ವಿಸ್ತರಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಹೀಗಾಗಿ ಅರ್ಧ ಗಂಟೆಯ ಆಟ ಹೆಚ್ಚುವರಿಯಾಗಿ ನಡೆಯಲಿದೆ. ಬೆಳಗ್ಗೆ ಪಂದ್ಯ 15 ನಿಮಿಷ ಮುಂಚಿತವಾಗಿ ಆರಂಭವಾಗಿ 15 ನಿಮಿಷ ತಡವಾಗಿ ಮುಗಿಯಲಿದೆ.