KPSC ಪರೀಕ್ಷೆ ಮುಂದೂಡುವಂತೆ ನಿಖಿಲ್ ಮನವಿ
ಬೆಂಗಳೂರು: KPSC ಪರೀಕ್ಷೆಯನ್ನು ಸ್ವಾರ್ಥಕ್ಕಾಗಿ ತಾರತುರಿಯಲ್ಲಿ ನಡೆಸುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ದೂರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕರ್ನಾಟಕ ಲೋಕಸೇವಾ ಆಯೋಗ (KPSC) ಇದೇ ಆಗಸ್ಟ್ 27ರಂದು ಪೂರ್ವಭಾವಿ ಪರೀಕ್ಷೆ ನಿಗದಿ ಮಾಡಿರುವುದು ಸರಿಯಷ್ಟೆ. ಕೆಲವರ ಸ್ವಾರ್ಥಕ್ಕಾಗಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವ ಆರೋಪವಿದ್ದು, ಪರೀಕ್ಷೆಗೆ ಬರೆಯಲು ಅನೇಕ ದಿನಗಳಿಂದ ಪ್ರಾಮಾಣಿಕವಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ, ಅದರಲ್ಲಿಯೂ ವಿಕಲಚೇತನ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ ಎಂಬ ಆರೋಪವಿದೆ. ರಜೆ ದಿನ ಹೊರತುಪಡಿಸಿ ಇತರೆ ದಿನಗಳಲ್ಲಿ ಪರೀಕ್ಷೆ ನಡೆಸಿದರೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೂ ಸಮಸ್ಯೆ ಆಗುತ್ತದೆ. ಈ ಬಗ್ಗೆ ಅಭ್ಯರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ಮುಂದೂಡುವಂತೆ ಮನವಿ ಮಾಡುತ್ತಿದ್ದರೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ #KPSC ಪರೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮಾಡುತ್ತಿದ್ದಾರೆ, ರಾಜ್ಯ ಸರ್ಕಾರವು ಅವರ ಕಾಳಜಿಯನ್ನು ನಿರ್ಲಕ್ಷಿಸಿದೆ ಮತ್ತು ಅವರ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಹೊರಟಿರುವುದು ಅಕ್ಷಮ್ಯ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅರವರೇ.? ಕೂಡಲೇ ಎಲ್ಲಾ ಅಭ್ಯರ್ಥಿಗಳಿಗೆ ಅನುಕೂಲವಾಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎನ್ನುವುದು ನನ್ನ ಒತ್ತಾಯವಾಗಿದೆ ಎಂದಿದ್ದಾರೆ.