For the best experience, open
https://m.samyuktakarnataka.in
on your mobile browser.

KSET ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

06:33 PM Aug 21, 2024 IST | Samyukta Karnataka
kset ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಬೆಂಗಳೂರು: Kset -25 ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 28 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.
1) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 28.08.2024, 2) ಆನ್‌ಲೈನ್ ಮೂಲಕ ಶುಲ್ಕ ಪಾವತಿಗೆ ಆಗಸ್ಟ್ 30 ಕೊನೆ ದಿನ. ಇದರ ನಂತರ ವಿಸ್ತರಣೆ ಇರುವುದಿಲ್ಲ ಎಂದು #KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ

Tags :