ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

Kset-24 ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

07:18 PM Aug 29, 2024 IST | Samyukta Karnataka

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 28.08.2024 ರ ವರೆಗೆ ವಿಸ್ತರಿಸಲಾಗಿತ್ತು. ಅದಾಗ್ಯೂ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 02.09.2024 ಮತ್ತು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಸೆ.3 ಕೊನೆ ದಿನವಾಗಿದ್ದು. ಈಗಾಗಲೇ ಎರಡು ಬಾರಿ ದಿನಾಂಕ ವಿಸ್ತರಿಸಿದ್ದು ಮತ್ತೊಮ್ಮೆ ವಿಸ್ತರಣೆ ಇರುವುದಿಲ್ಲ ಎಂದು ತಿಳಿಸಿದೆ.

Tags :
#KEA#KSET
Next Article