For the best experience, open
https://m.samyuktakarnataka.in
on your mobile browser.

KSRTCಯಲ್ಲಿ 9,000 ಹುದ್ದೆ ಭರ್ತಿಗೆ ನಿರ್ಧಾರ

05:28 PM Jun 11, 2024 IST | Samyukta Karnataka
ksrtcಯಲ್ಲಿ 9 000 ಹುದ್ದೆ ಭರ್ತಿಗೆ ನಿರ್ಧಾರ

ಬೆಂಗಳೂರು: ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9,000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9,000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. 2,000 ಹುದ್ದೆಗಳನ್ನು ಈಗಾಗಲೇ ತುಂಬಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿದೆ. 5,800 ಹೊಸ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದ್ದು, ಅದರಲ್ಲಿ ಈಗಾಗಲೇ 2,400 ಬಸ್‌ ಖರೀದಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.