For the best experience, open
https://m.samyuktakarnataka.in
on your mobile browser.

MSP ಅಡಿ ಉದ್ದು, ಸೋಯಾಬೀನ್ ಖರೀದಿಗೆ ಕೇಂದ್ರ ಅನುಮತಿ

10:57 AM Aug 30, 2024 IST | Samyukta Karnataka
msp ಅಡಿ ಉದ್ದು  ಸೋಯಾಬೀನ್ ಖರೀದಿಗೆ ಕೇಂದ್ರ ಅನುಮತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ black gram ( ಉದ್ದು) ಮತ್ತು ಸೋಯಾಬೀನ್ ಖರೀದಿಗೆ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಗೆ ಭಾರತ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.
ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ MSP ಅಡಿಯಲ್ಲಿ ಉದ್ದು ಮತ್ತು ಸೋಯಾಬೀನ್ ಗಳಿಗೆ ಪ್ರತೀ ಕ್ವಿಂಟಾಲ್ ಗೆ ₹7,400 ಮತ್ತು ₹4,892 ಮೌಲ್ಯದಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೈತ ಪರ ಕ್ರಮ ಕೈಗೊಂಡಿದ್ದು ರಾಜ್ಯದ ರೈತರು ಬೆಳೆದ 19,760 MT ಉದ್ದಿನ ಬೇಳೆ ಹಾಗೂ 1,03,315 MT ಸೋಯಾಬೀನ್ ಬೆಳೆಗಳನ್ನು ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು ರಾಜ್ಯದ ರೈತರ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ , Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದೆ. ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ವಿನಂತಿಸುತ್ತೇನೆ. ರಾಜ್ಯದ ರೈತರ ಸಮಸ್ಯೆಗೆ ಸತತವಾಗಿ ಸ್ಪಂದಿಸಿ ಬೆಳೆಗಳ ಖರೀದಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದಗಳು ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರ - ರೈತರ ಪರ ಸರ್ಕಾರ ಎಂದಿದ್ದಾರೆ.

Tags :