ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

NDA ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿ

01:34 PM Aug 08, 2024 IST | Samyukta Karnataka

ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ: ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು

Tags :
#Bjp#cmsiddaramaiahcongress
Next Article