PGCET 2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
03:56 AM Jun 18, 2024 IST
|
Samyukta Karnataka
ಬೆಂಗಳೂರು: ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಶುಲ್ಕ ಪಾವತಿಸಲು ಜೂನ್ 21ವರೆಗೆ ಅವಕಾಶ ನೀಡಲಾಗಿದೆ. ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶ ಪರೀಕ್ಷೆ ಜುಲೈ 13ರಂದು ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಜುಲೈ 14ರಂದು ನಡೆಸಲಾಗುತ್ತದೆ.
ಈ ಹಿಂದೆ ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಮತ್ತೆ ಮೂರು ದಿನ ವಿಸ್ತರಣೆ ಮಾಡಲಾಗಿದೆ.
Next Article