SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ
06:23 PM Jul 10, 2024 IST | Samyukta Karnataka
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಪಿ, ಟಿಎಸ್‌ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.
ಈ ಕುರಿತಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಜಿಕ ಜಾಲತಾಣದಲ್ಲಿ ಪತ್ರ ಹಂಚಿಕೊಂಡಿದ್ದಾರೆ. ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್ಗೆ ಪತ್ರ ಬರೆದಿದ್ದಾರೆ.