ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

06:23 PM Jul 10, 2024 IST | Samyukta Karnataka

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿ, ಎಸ್​ಪಿ, ಟಿಎಸ್​​​ಪಿ (SCSP, TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ.
ಈ ಕುರಿತಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಾಮಜಿಕ ಜಾಲತಾಣದಲ್ಲಿ ಪತ್ರ ಹಂಚಿಕೊಂಡಿದ್ದಾರೆ. ಸರ್ಕಾರದ ಪಂಚ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸಿದೆ. ಹೀಗಾಗಿ 2024-25ನೇ ಹಣಕಾಸು ವರ್ಷಕ್ಕಾಗಿ ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಎಸ್​ಸಿಎಸ್​ಪಿ, ಟಿಎಸ್​ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ರಾಜ್ಯ ಸರ್ಕಾರದ ಸಿಎಸ್​​ಗೆ ಪತ್ರ ಬರೆದಿದ್ದಾರೆ.

Next Article