For the best experience, open
https://m.samyuktakarnataka.in
on your mobile browser.

SSLC ಫಲಿತಾಂಶ: ಶೇ 73.4 ತೇರ್ಗಡೆ

11:20 AM May 09, 2024 IST | Samyukta Karnataka
sslc ಫಲಿತಾಂಶ  ಶೇ 73 4 ತೇರ್ಗಡೆ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ.
ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊನೆಯ ಸಾಲಿನಲ್ಲಿ ಯಾದಗಿರಿ ಜಿಲ್ಲೆ ಪಡೆದಿದೆ. ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.